March 12, 2026

ಮಂಗಳೂರು: ರೈಲಿನಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

0
image_editor_output_image-638526850-1747547283540

ಮಂಗಳೂರು: ರೈಲಿನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವರಿಗೆ ಹೃದಾಯಾಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು ಚೆನ್ನೈ ಮೇಲ್ ಎಕ್ಸ್‌ಪ್ರೆಸ್‌ ನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರಿಗೆ ಹೃದಯಾಘಾತವಾಗಿದೆ.

ತಕ್ಷಣ ಆರ್‌ಪಿಎಫ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ಯಾದವ್ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್ ಕೊಡಿಸಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರು. ಆದರೆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.೦೦ ಗಂಟೆಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನೂಕೂಡಾ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!