December 19, 2025

ಬಂಟ್ವಾಳ: ಕೆಎಸ್ಆರ್ ಟಿ ಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ: ಸವಾರ ಮೃತ್ಯು

0
image_editor_output_image1539862419-1747638480143

ಬಂಟ್ವಾಳ : ಕೆಎಸ್ಸಾರ್ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. ಪಾಣೆಮಂಗಳೂರು – ನೆಹರನಗರದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.

ಮಂಗಳೂರು ನಿವಾಸಿ ಆಲಿಸ್ಟಾರ್ ಡಿಸೋಜ (24) ಮೃತಪಟ್ಟವರು.

ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ನೆಹರು ನಗರದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸು ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!