March 12, 2026

ಬೆಳ್ತಂಗಡಿ: ತೋಟದ ಬೇಲಿಗೆ ಡಿಕ್ಕಿ ಹೊಡೆದ ಕಾರು

0
image_editor_output_image-1159163749-1747648882137

ಬೆಳ್ತಂಗಡಿ: ಇಂದು ಮುಂಜಾನೆ(ಮೇ.19) ದಿಡುಪೆ-ಪೈಚಾರು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ-ಕಲ್ಮಂಜ-ಧರ್ಮಸ್ಥಳ ರಸ್ತೆಯ ಒಂಜರೆಬೈಲು ಎಂಬಲ್ಲಿ ಧರ್ಮಸ್ಥಳ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆ ಬದಿಯ ತೋಟದ ಬೇಲಿಗೆ ಡಿಕ್ಕಿ ಹೊಡೆದಿದೆ.

ಈ ಕಾರಿನಲ್ಲಿ ಬೆಂಗಳೂರು ಮೂಲದ ಇಬ್ಬರು ಪ್ರಯಾಣಿಸುತ್ತಿದ್ದರು. ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿದ್ರೆಯ ಮಂಪರು ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಬೇಲಿಯನ್ನು ದಾಟಿ ಮುಂದುವರಿಯುತ್ತಿದ್ದರೆ ಆಳವಾದ ಕಣಿವೆಗೆ ಬೀಳುವ ಸಾಧ್ಯತೆ ಇತ್ತು. ಹಾಗೂ ಸಮೀಪದಲ್ಲಿ ವಿದ್ಯುತ್ ಕಂಬವು ಇದೆ. ಕಾರು ಬೇಲಿಗೆ ಸಿಲುಕಿಕೊಂಡ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!