December 18, 2025

ಮಂಗಳೂರ: ಮಂಗಳೂರು ಜೈಲಿನಲ್ಲಿ ಕೈದಿಗಳ ಗಲಾಟೆ:

0
image_editor_output_image804918132-1747667505373

ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇಂದು ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಹಲ್ಲೆ ನಡೆಸಲು ಯತ್ನ ನಡೆದಿದೆ. ಈ ಘಟನೆಯಿಂದ ಜೈಲಿನ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಜೈಲಿನ ಮೂಲಗಳ ಪ್ರಕಾರ, ಬಿ ಬ್ಯಾರಕ್‌ನಲ್ಲಿದ್ದ ಕೈದಿಗಳು ನೌಷಾದ್‌ನನ್ನು ಮೈಸೂರು ಜೈಲಿಗೆ ಸ್ಥಳಾಂತರಿಸುವ ಸಂದರ್ಭದಲ್ಲಿ ಕಲ್ಲು ತೂರಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಘಟನೆಯೂ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಜೈಲು ಸಿಬ್ಬಂದಿಗಳು ದಾಳಿಯನ್ನು ವಿಫಲಗೊಳಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!