December 15, 2025

ವಿದೇಶಕ್ಕೆ ತೆರಳಲಿರುವ ಸರ್ವ ಪಕ್ಷ ನಿಯೋಗದಲ್ಲಿ ಕರ್ನಾಟಕದ ಬ್ರಿಜೇಶ್ ಚೌಟ ಮತ್ತು ತೇಜಸ್ವಿ ಸೂರ್ಯ ಗೆ ಸ್ಥಾನ

0
images-2.jpeg

ಮಂಗಳೂರು: ಪಾಕಿಸ್ತಾನದೊಂದಿಗಿನ ಸಂಘರ್ಷದ ಬೆನ್ನಲ್ಲೇ, ಭಯೋತ್ಪಾದನೆ ಕುರಿತ ತನ್ನ ನಿಲುವನ್ನು ಜಾಗತಿಕ ಸಮುದಾಯಕ್ಕೆ ವಿವರಿಸಲು ರಚಿಸಲಾದ ಸರ್ವಪಕ್ಷಗಳ ಸದಸ್ಯರ ನಿಯೋಗದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತೇಜಸ್ವಿ ಸೂರ್ಯ ಸ್ಥಾನಪಡೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕ್ಯಾ.ಚೌಟ, ‘ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಸಿಕ್ಕಿರುವ ಈ ಪ್ರಪ್ರಥಮ ಅವಕಾಶವು ನನ್ನ ಪಾಲಿಗೆ ಶ್ರೇಷ್ಠವಾದುದು.

ಹೇಡಿತನದ ಭಯೋತ್ಪಾದಕ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಪ್ರತೀಕಾರ ತೀರಿಸಿಕೊಂಡ ರೀತಿಯ ಬಗ್ಗೆ ಒಬ್ಬ ಯೋಧನಾಗಿ ನನಗೆ ಅಪಾರ ಹೆಮ್ಮೆಯಿದೆ. ಈ ಎಲ್ಲದರ ಹಿಂದಿನ ಶಕ್ತಿಯಾಗಿರುವ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನದ ಮತ್ತು ಧ್ಯೇಯದ ಧ್ವನಿಯಾಗಲು ಈ ನಿಯೋಗದ ಭಾಗವಾಗಿ ಅವಕಾಶ ನೀಡಿದ್ದಕ್ಕಾಗಿ ನಾನು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಡಾ.ಶಶಿ ತರೂರ್‌ ನೇತೃತ್ವದ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇದ್ದು, ಈ ತಂಡವು ಅಮೆರಿಕ, ಪನಾಮ, ಗಯಾನಾ, ಬ್ರೆಜಿಲ್‌, ಕೊಲೊಂಬಿಯ ದೇಶಗಳಿಗೆ ಭೇಟಿ ಕೊಡಲಿದೆ. ಕನಿಮೊಳಿ ಕರುಣಾನಿಧಿ ನೇತೃತ್ವದ ತಂಡವು ಸ್ಪೇನ್‌, ಗ್ರೀಸ್‌, ಸ್ಲೊವೇನಿಯ, ರಷ್ಯಾ ದೇಶಗಳಿಗೆ ಭೇಟಿ ನೀಡಲಿದ್ದು, ಈ ನಿಯೋಗದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಇರಲಿದ್ದಾರೆ.

ಕ್ಯಾ.ಚೌಟ ಅವರು ಸದಸ್ಯರಾಗಿರುವ ಡಿಎಂಕೆ ಸಂಸದೆ ಕನಿಮೋಳಿ ನೇತೃತ್ವದ ಎಂಟು ಮಂದಿ ಸಂಸದರ ನಿಯೋಗವು ರಷ್ಯಾ, ಸ್ಪೇನ್‌, ಗ್ರೀಸ್‌, ಸ್ಲೋವೇನಿಯಾ, ಲಾಟ್ವಿಯಾ ದೇಶಗಳಿಗೆ ಭೇಟಿ ನೀಡಲಿದೆ.

Leave a Reply

Your email address will not be published. Required fields are marked *

You may have missed

error: Content is protected !!