March 12, 2026

ಶಾಸಕ ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

0
Harish_vb_47.jpeg

ಉಪ್ಪಿನಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿದ್ದ ಪೊಲೀಸರು ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಎಫ್ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಈ ನಡುವೆ ಪೊಲೀಸರು ಶಾಸಕ ಪೂಂಜ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಶಾಸಕ ಹರೀಶ್ ಪೂಂಜಾಗೆ ಮತ್ತೊಂದು ಹಿನ್ನಡೆಯಾಗಿದೆ. ಇಂದು (ಮೇ 20) ಪ್ರಕರಣ ಸಂಬಂಧ ವಾದ – ಪ್ರತಿವಾದ ನಡೆಯಲಿದೆ. ದೂರುದಾರ ಎಸ್ ಬಿ. ಇಬ್ರಾಹಿಂ ಅವರ ಪರವಾಗಿ ಹೈಕೊರ್ಟಿನ ಹಿರಿಯ ನ್ಯಾಯವಾದಿ ಬಾಲನ್ ಅವರು ವಾದಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!