July 6, 2026

ವಿದ್ಯುತ್ ಟ್ರಾನ್ಸ್‌ಫರ್ಮರ್ ಗೆ ಬಸ್ ಡಿಕ್ಕಿ:
20ಕ್ಕೂ ಹೆಚ್ಚು ಮಂದಿಗೆ ಗಾಯ

0
n3436878601640168281187a21e72a043e3c42facd7bd5e1f0b72928be5220f9437f9d2315b735518abc40e.jpg

ದಾವಣಗೆರೆ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಂತ ಖಾಸಗಿ ಬಸ್ ಒಂದು ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿಯಾಗಿ, ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಎಲೆಬೇತೂರು ಬಳಿಯಲ್ಲಿ ಸಾಗುತ್ತಿದ್ದಂತ ಖಾಸಗೀ ಬಸ್ ಒಂದು ಎದುರಿಗೆ ಬಂದಂತ ಬೈಕ್ ಸವಾರನನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ, ಅದರಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ವಿದ್ಯುತ್ ಪೂರೈಕೆ ಇಲ್ಲದ ಕಾರಣ, ಭಾರೀ ಅನಾಹುತವೊಂದು ತಪ್ಪಿದೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!