February 2, 2026

ಮಕ್ಕಳ ಸ್ಕೂಲ್ ಫೀಸ್ ಕಟ್ಟಲು ಕಳ್ಳತನ ಮಾಡಿದ್ದ ಕಳ್ಳನ ಬಂಧನ: ಕಳ್ಳತನ ಮಾಡಿದ ಹಣದಲ್ಲಿ 20 ಮಕ್ಕಳ ಫೀಸ್ ಕಟ್ಟಿದ ಆರೋಪಿ

0
n6651196131747800932936ac9b2b1b1d742d156e5b4b91d1077b5db846b16148aac4845f49ebbc03c2b0fb.jpg

ಬೆಂಗಳೂರು: ಮಕ್ಕಳ ಸ್ಕೂಲ್ ಫೀಸ್ ಕಟ್ಟಲು 20 ಲಕ್ಷ ರೂಪಾಯಿ ಕಳ್ಳತನ ಮಾಡಿದ್ದ ಕಳ್ಳನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಬಂಧಿತ ಕಳ್ಳ. ಹೆಂಡತಿ, ಮಕ್ಕಳಿಲ್ಲದ ಶಿವು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಏರಿಯಾದಲ್ಲಿ ಸ್ನೇಹಿತರ ಮಕ್ಕಳು ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ.

ಬಳಿಕ ಶಿವು ಬ್ಯಾಡರಹಳ್ಳಿ ಸೇರಿ ಹಲವೆಡೆ ಮನೆಗಳಿಗೆ ಕನ್ನ ಹಾಕಿದ್ದು, ಕದ್ದ ಚಿನ್ನಾಭರಣವನ್ನು ಸ್ನೇಹಿತರಾದ ಅನಿಲ್ ಮತ್ತು ವಿವೇಕ್‌ನ ಸಹಾಯದಿಂದ ಮಾರಾಟ ಮಾಡಿದ್ದಾನೆ.

ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು, ಬಂದ ಹಣದಲ್ಲಿ ವಿವೇಕ್‌ಗೆ 4 ಲಕ್ಷ, ಅನಿಲ್‌ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ 14 ಲಕ್ಷ ರೂ. ಹಣದಲ್ಲಿ ಏರಿಯಾದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜ್ ಫೀಸ್ ಕಟ್ಟಿದ್ದಾನೆ. ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಿವು, ಅನಿಲ್ ಹಾಗು ವಿವೇಕ್‌ನನ್ನು ಬಂಧಿಸಿದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ಸೀಜ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!