ಜಾರ್ಖಂಡ್ ನಲ್ಲಿ ಎನ್ಕೌಂಟರ್ ಗೆ ನಕ್ಸಲ್ ಮುಖಂಡ ಸಹಿತ ಇಬ್ಬರ ಬಲಿ

ರಾಂಚಿ: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ನಾಯಕ ಸೇರಿ ಇಬ್ಬರನ್ನು ಹತ್ಯೆಗೈದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ‘ಜಾರ್ಖಂಡ್ ಜನ ಮುಕ್ತಿ ಪರಿಷತ್’ನ ನಾಯಕ ಸೇರಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಒಬ್ಬರಿಗೆ 10 ಲಕ್ಷ ರೂಪಾಯಿ ಮತ್ತು ಇನ್ನೊಬ್ಬರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಘಟನೆಯಲ್ಲಿ ಗುಂಪಿನ ಮತ್ತೊಬ್ಬ ಸದಸ್ಯ ಗಾಯಗೊಂಡು, ಆತನನ್ನು ಬಂಧಿಸಲಾಗಿದ್ದು, ಆತನಿಂದ INSAS ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಇಬ್ಬರೂ ನಕ್ಸಲರು ಜಾರ್ಖಂಡ್ ಜನ ಮುಕ್ತಿ ಪರಿಷತ್ ಎಂಬ ಸಂಘಟನೆಯ ಸದಸ್ಯರಾಗಿದ್ದರು. ಭದ್ರತಾ ಪಡೆಗಳ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದ ಅಧಿಕಾರಿಗಳು ಪಪ್ಪು ಲೋಹರ್ ತನ್ನ ಸಂಘಟನೆಯ ಸದಸ್ಯರೊಂದಿಗೆ ಇಚ್ಛಾವರ್ ಕಾಡಿನಲ್ಲಿ ಒಂದು ದೊಡ್ಡ ದಾಳಿ ನಡೆಸಲು ಯೋಜಿಸುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದವು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದೆ ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ಪಲಮು ಡಿಐಜಿ ವೈಎಸ್ ರಮೇಶ್, ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಮಾವೋವಾದಿ ನಾಯಕರು ಸಾವನ್ನಪ್ಪಿದ್ದಾರೆ ಪೊಲೀಸರು ಅವರ ಶವಗಳನ್ನು ವಶಪಡಿಸಿಕೊಂಡಿದ್ದಾರೆ. ಲೋಹರಾ ಮತ್ತು ಅವರ ಸಹಚರರು ಅರಣ್ಯದಲ್ಲಿರುವ ಮಾಹಿತಿಯ ಮೇರೆಗೆ, ಲತೇಹಾರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕುಮಾರ್ ಗೌರವ್ ನೇತೃತ್ವದ ಭದ್ರತಾ ಸಿಬ್ಬಂದಿಯ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ನಾಯಕರು ಹತರಾಗಿದ್ದು ಓರ್ವನನ್ನು ಬಂಧಿಸಿದ್ದಾರೆ.