December 15, 2025

ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ  ಭವೇಶ್ ಜಯಂತಿಗೆ ಮೊದಲ ಸ್ಥಾನ

0
exams-pti-1006650-1625844189

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ರ ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದರು.


ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಚಿವ ಸುಧಾಕರ್ ಹೇಳಿದರು.

ಯಾರೆಲ್ಲ ಟಾಪರ್ಸ್​?
ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್​​ಇ ಶಾಲೆಯ ಭವೇಶ್ ಜಯಂತಿ (98.67%) ಮೊದಲ ಸ್ಥಾನ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ (99.33%) ಎರಡನೇ ಸ್ಥಾನ ಗಳಿಸಿದ್ದಾರೆ ಎಂದು ಸಚಿವರು ತಿಳಿಸಿದರು. ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ಸ್ಥಾನ (99%) ಗಳಿಸಿದ್ದಾರೆ.

ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You may have missed

error: Content is protected !!