March 12, 2026

ಮೂಡುಬಿದಿರೆ: ಭಾರೀ ಮಳೆಯ ನಡುವೆಯೂ ಫಾಲ್ಸ್ ನಲ್ಲಿ ಯುವಕರಿಂದ ಮೋಜಿನಾಟ

0
image_editor_output_image864844537-1748245204260

ಮೂಡುಬಿದಿರೆ: ದ.ಕ ಜಿಲ್ಲಾದ್ಯಂತ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆಗಳು ಉಕ್ಕಿ ಹರಿಯುತ್ತಿದೆ. ಇದರ ನಡುವೆ ಮೂಡಬಿದ್ರಿ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಪ್ರವಾಸಿಗರು ಮೋಜಿನಾಟ ನಡೆಸುತ್ತಿರುವುದು ಕೂಡ ಬೆಳಕಿಗೆ ಬಂದಿದೆ. ಇನ್ನು ಹೀಗೆ ಮೋಜಿನಾಟದಲ್ಲಿ ನಿರತರಾಗಿದ್ದ ವೇಳೆ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ ಘಟನೆ ಆದಿತ್ಯವಾರ ನಡೆದಿದೆ.

ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪರಿಸರದಲ್ಲಿ ಈ ಹಿಂದೆ ಕೂಡ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಇಲ್ಲಿಗೆ ಮೋಜಿನಾಟಕ್ಕೆ ಬರುವ ಪ್ರವಾಸಿಗರನ್ನು ಎಚ್ಚರಿಸುವ ಕಾರ್ಯ ಮಾಡಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!