March 12, 2026

ಉಪ್ಪಿನಂಗಡಿ: ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು

0
image_editor_output_image150347447-1748274838239

ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ವಿಶ್ವಜಿತ್(23) ಎಂದು ಗುರುತಿಸಲಾಗಿದೆ.

ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ವೃತ್ತಿ ಮಾಡುತ್ತಿದ್ದು. ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಒಮ್ನಿ ಕಾರೊಂದನ್ನು ಹಿಂದಿಕ್ಕಿ ಹೋಗುರವ ಭರದಲ್ಲಿ ಎದುರಿನಿಂದ ಬರುತ್ತಿದ್ದ ವಿಶ್ವಜಿತ್ ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕನನ್ನು ಕಡಬ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾನೆ. ಇದೇ ವೇಳೆ ಒಮ್ನಿ‌ ಕಾರಿಗೂ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!