March 12, 2026

ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಬಿಜೆಪಿ ಪಕ್ಷದಿಂದ ಉಚ್ಚಾಟನೆ

0
Untitled-design-2.png

ಬೆಂಗಳೂರು: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.

2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದ್ದಾರೆ.

ಉಚ್ಚಾಟನೆ ಬೆನ್ನಲ್ಲೇ ಮಾತನಾಡಿರುವ ಹೆಬ್ಬಾರ್, ‘ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ನಾನು ಹೇಳುತ್ತೇನೆ, ಪಕ್ಷದ ವಿರುದ್ಧ ನಾನು ಮಾತನಾಡಲು ಕಾರಣ ಏನೆಂದು ತಿಳಿಸುತ್ತೇನೆ. ನನ್ನ ಮುಂದಿನ ತೀರ್ಮಾನದ ಬಗ್ಗೆ ಕಾದು ನೋಡಿ’ ಎಂದು ಹೆಬ್ಬಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!