ಬಂಟ್ವಾಳ: ಇಬ್ಬರು ಯುವಕರ ಮೇಲೆ ತಲ್ವಾರ್ ದಾಳಿ: ಓರ್ವ ಮೃತ್ಯು
ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು (ಮಂಗಳವಾರ) ನಡೆದಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಸಹೋದರ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ.
ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕಡಿಯಲಾಗಿದೆ. ಆದರೆ ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದಾರೆ.





