March 12, 2026

ಕಾಸರಗೋಡು: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ

0
image_editor_output_image-245745721-1748351976552

ಕಾಸರಗೋಡು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ಹೊರವಲಯದ ವಿದ್ಯಾನಗರದಲ್ಲಿ ನಡೆದಿದ್ದು, ಚಾಲಕ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ವಿದ್ಯಾನಗರ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾನಗರ ಪವಿತ್ರಸ್ ಪಾರಾದವರು. ಕಾರಿನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆಗೆ ಮುರಿದು ಬಿದ್ದಿದೆ. ವಿದ್ಯುತ್ ತಂತಿ ಸಹಿತ ಮುರಿದು ಕಾರಿನ ಮೇಲೆ ಬಿದ್ದಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ವಿದ್ಯುತ್ ಮಂಡಳಿ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವುಗೊಳಿಸಿದರು. ಕಾರಿಗೆ ಹಾನಿ ಉಂಟಾಗಿದೆ.

Leave a Reply

Your email address will not be published. Required fields are marked *

error: Content is protected !!