ಬಂಟ್ವಾಳ: ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ಆಸ್ಪತ್ರೆ ಮುಂದೆ ಜಮಾಯಿಸಿದ ಜನರು-ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕ್ರಮ ಕೈಗೊಂಡಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ-ಆಕ್ರೋಶ
ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಯ ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಸ್ಪತ್ರೆ ಮುಂಭಾಗ ಜನರು ಜಮಾಯಿಸಿದ್ದು,ಆರೋಗ್ಯ ವಿಚಾರಿಸಲು ಬಂದ ದ.ಕ ಜಿಲ್ಲಾ ವಕ್ಫ್ ಸಲಹ ಸಮಿತಿ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್ ಸೇರಿದಂತೆ ಕೆಲ ಮುಸ್ಲಿಂ ಮುಖಂಡರನ್ನು ಯುವಕರು ಅಡ್ಡ ಗಟ್ಟಿ ತರಾಟೆಗೆ ತೆಗೆದ ಪ್ರಸಂಗ ನಡೆಯಿತು.
ಮೊನ್ನೆ ನಡೆದ ಬಜಪೆ ಬೃಹತ್ ಜನಾಗ್ರಹ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ ಎಂದು ನಾಯಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದರು.
ನಾವು ನಾಳೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಮಾಡುವುದಾಗಿ ಮುಸ್ಲಿಂ ಯುವಕರಿಂದ ಎಚ್ಚರಿಕೆ ನೀಡಿದರು.
ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಆಸ್ಪತ್ರೆಗೆ ಭೇಟಿ ನೀಡಿದರು.




