March 12, 2026

ಮಂಗಳೂರು: ಶರಣ್ ಪಂಪ್ ವೆಲ್ ಗೆ ಜಾಮೀನು ಮಂಜೂರು

0
image_editor_output_image969423034-1748361746182

ಮಂಗಳೂರು: ಬಜರಂಗದಳ ಮುಖಂಡ ಶರಣ್ ಪಂಪ್‌ವೆಲ್‌ಗೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಕದ್ರಿ ಪೊಲೀಸರು ಇವರನ್ನು ಬಂಧಿಸಿದ್ದರು.

ಬಂಧನದ ಬಳಿಕ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿ ಆದೇಶಿಸಿದರು.

ಇದೀಗ ನ್ಯಾಯಾಲಯದಿಂದ ಜಾಮೀನು ದೊರೆತಿರುವುದರಿಂದ ಶರಣ್ ಪಂಪ್‌ವೆಲ್ ಬಿಡುಗಡೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!