March 12, 2026

ಕಂಬಳಬೆಟ್ಟು: ಕಾಂಗ್ರೆಸ್ ಬೂತ್ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ರಝಾಕ್ ಮೊನು ರಾಜೀನಾಮೆ

0
image_editor_output_image-897307337-1748440410945

ವಿಟ್ಲ: ಕಂಬಳಬೆಟ್ಟು ಕಾಂಗ್ರೆಸ್  ಬೂತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಮೊನು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಂಟ್ವಾಳ ತಾಲೂಕಿನಲ್ಲಿ ನಡೆದ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ವಿಚಾರದಲ್ಲಿ ಸರಕಾರದ ವೈಫಲ್ಯ ಮತ್ತು ಧೋರಣೆಯನ್ನು ಖಂಡಿಸಿ ತಾನು ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ.

ಕೆಲವು ದಿನಗಳಿಂದ ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಕೋಮುದ್ವೇಷ ಭಾಷಣ, ಸಭೆ, ಪ್ರತೀಕಾರದ ಹೇಳಿಕೆಗಳು ನೀಡುತ್ತಿದ್ದರೂ ಅದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಇಲಾಖೆ ಮತ್ತು ಸರಕಾರ ವಿಫಲವಾದ ಪರಿಣಾಮ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಪುನರಾವರ್ತನೆಯಾಗುತ್ತಿದೆ, ನಾವು ಶಾಂತಿ, ಸೌಹಾರ್ದತೆಯನ್ನು ಬಯಸುವವರಾಗಿದ್ದು ಅಮಾಯಕ ಯುವಕರ ಹತ್ಯೆ ಹಲ್ಲೆ ಘಟನೆಗಳು ನಡೆಯುತ್ತಿರುವಾಗ ಅದರ ವಿರುದ್ಧ ಕಠಿಣ ಕ್ರಮ ಜರುಗಿಸಿ ಶಾಂತಿ ಸ್ಥಾಪನೆ ಮಾಡಲು ಇಲಾಖೆ ಮತ್ತು ಸರಕಾರ ವಿಫಲವಾಗಿರುವುದರಿಂದ ಮನಸ್ಸಿಗೆ ಬೇಸರ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಹತ್ಯೆಯಾದ ಅಮಾಯಕ ಯುವಕನಿಗೆ ನ್ಯಾಯ ಸಿಗಬೇಕು ಮತ್ತು ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸರಕಾರ ಮತ್ತು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಬ್ದುಲ್ ರಝಾಕ್ ಮೊನು ಕಂಬಳಬೆಟ್ಟು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!