December 18, 2025

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಖಂಡರ ವಿರುದ್ಧ ಆಕ್ರೋಶ-ವೇದಿಕೆಗೆ ನುಗ್ಗಿದ ಕಾರ್ಯಕರ್ತರು: ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

0
image_editor_output_image560683629-1748519620906

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್‌ ಸಭಾಂಗಣದಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಕಾಂಗ್ರೆಸ್ ಸರ್ಕಾರ ನೇರ ಕಾರಣ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಎಂ ಎಸ್ ಮುಹಮ್ಮದ್, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್, ಸುಹೈಲ್ ಕಂದಕ್ ಜನಸಮೂಹವನ್ನು ಸಮಾಧಾನ ಪಡಿಸಲು ಯತ್ನಿದರು. ಆದರೆ ಕಾರ್ಯಕರ್ತರು ಪಟ್ಟು ಬಿಡಲಿಲ್ಲ. ಕೊನೆಗೆ ನಾಯಕರು ನಮ್ಮ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಸಾಮೂಹಿಕ‌ ರಾಜೀನಾಮೆ ನೀಡಿರುವುದಾಗಿ ಪ್ರಕಟಿಸಿದರು.

►ರಾಜೀನಾಮೆ ಒಂದು ವಾರ ಮುಂದೂಡಲು ನಿರ್ಧರಿಸಿದ್ದ ನಾಯಕರು; ಸಭೆಯಲ್ಲಿ ಕೋಲಾಹಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೀಕರ ಹತ್ಯೆಗಳ ಬೆನ್ನಿಗೆ ಕಾಂಗ್ರೆಸ್ ರಾಜೀನಾಮೆ ಪ್ರಕಟಿಸಲು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಗುರುವಾರ ನಗರದ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದಿದ್ದರು.

Leave a Reply

Your email address will not be published. Required fields are marked *

error: Content is protected !!