ಸುಳ್ಯ: ಆಟೋ ರಿಕ್ಷಾ ಬಾಡಿಗೆಗೆ ಕೊಂಡೊಯ್ದು ಚಾಲಕನನ್ನು ಥಳಿಸಿ ರಿಕ್ಷಾ ಕದ್ದು ಪರಾರಿಯಾಗಲು ಯತ್ನ:
ಆರೋಪಿಯನ್ನು ಹಿಡಿಯುವಲ್ಲಿ ಕೇರಳ ಪೊಲೀಸರು ಯಶಸ್ವಿ
ಸುಳ್ಯ: ಅಜ್ಜಾವರ ದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು ಕರೆದೊಯ್ದಿದ್ದು, ಆಟೋ ರಿಕ್ಷಾ ಅಡ್ಪಂಗಾಯದ ಬಳಿ ತಲುಪುತ್ತಿದ್ದಂತೆ ಆಟೋದಲ್ಲಿದ್ದ ವ್ಯಕ್ತಿಗಳು ಏಕಾಏಕಿ ಆಟೋ ಚಾಲಕ ಹುಸೈನ್ ಎಂಬಾತನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ನಂತರ ಆಟೋಚಾಲಕನ ಬಳಿಯಲ್ಲಿದ್ದ ಮೊಬೈಲ್ ಮತ್ತು ಹಣವನ್ನು ಕಿತ್ತು ಆಟೋ ಸಮೇತ ಕೇರಳದ ಕಡೆಗೆ ಪರಾರಿಯಾಗಿದ್ದಾರೆ.
ಘಟನೆ ತಿಳಿದ ಸ್ಥಳೀಯರು ಆದೂರು ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ ಹಿನ್ನೆಲೆ ಆದೂರು ಪೊಲೀಸರು ದೇವರಡ್ಕ ಪುದಿಯ ಅಂಬಲಂ ಎಂಬಲ್ಲಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಆರೋಪಿಗಳನ್ನು ಆದೂರು ಠಾಣೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.





