ಬಂಟ್ವಾಳ: ಹತ್ಯೆಯಾದ ಅಬ್ದುಲ್ ರಹೀಂ ಮನೆ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಲಿದೆ-ಹಿಂದಿರುವ ದುಷ್ಟಶಕ್ತಿಗಳನ್ನು ಪತ್ತೆ ಹಚ್ಚಿ ಕ್ರಮ
ಬಂಟ್ವಾಳ: ಇತ್ತೀಚೆಗೆ ಕೊಳತ್ತಮಜಲಿನಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಮನೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದರು.
ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಅಬ್ದುಲ್ ರಹೀಂ ಅವರಿಗೆ ಯಾರ ಜೊತೆನೂ ದ್ವೇಷ ಇರಲಿಲ್ಲ. ರಹೀಂ ಅಂತ್ಯ ಕ್ರಿಯೆಗೆ ಎಲ್ಲಾ ಸಮಾಜದವರೂ ಬಂದಿದ್ದರು ಎಂದು ತಿಳಿಸಿದರು.
ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಲಿದೆ, ಈ ಕೃತ್ಯದ ಹಿಂದಿರುವ ದುಷ್ಟ ಶಕ್ತಿಗಳನ್ನೂ ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕಾನೂನು ಕ್ರಮ ಕಟ್ಟುನಿಟ್ಟಾಗಿ ಆಗುತ್ತಿದೆ, ಕುಟುಂಬಕ್ಕೆ ನ್ಯಾಯ ಕೊಡಿಸ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಎಂಎಲ್ ಸಿ ಐವನ್ ಡಿಸೋಜಾ, ಮೊಹಮ್ಮದ್ ಮೋನು ಉಪಸ್ಥಿತರಿದ್ದರು.





