ಮಂಗಳೂರು: ಜಿಲ್ಲೆಯಾದ್ಯಂತ ಒಟ್ಟು 36 ಮಂದಿಯನ್ನು ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ 9, ವಿಟ್ಲ ಠಾಣಾ ವ್ಯಾಪ್ತಿಯಿಂದ 3, ಬಂಟ್ವಾಳ ಠಾಣಾ ವ್ಯಾಪ್ತಿಯಿಂದ 10 ಮಂದಿಯ ಹೆಸರು ಪಟ್ಟಿಯಲ್ಲಿದೆ.