ವಿಟ್ಲ ; ಹೊರೈಝನ್ ಶಾಲೆ ಪ್ರಾರಂಭೋತ್ಸವ.
ವಿಟ್ಲ; ವಿಟ್ಲ ಹೊರೈಝನ್ ಪಬ್ಲಿಕ್ ಸ್ಕೂಲ್ ನ ಪ್ರಾರಂಭೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೊಟು ಅವರು ಅಧ್ಯಕ್ಷತೆ ವಹಿಸಿದ್ದರು.
ಶಾಲೆಯ ಸದರ್ ಉಮರ್ ಸಅದಿ ಪ್ರಾರ್ಥನೆ ಮೂಲಕ ತರಗತಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭ ಶಾಲೆಯ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಿ ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ವಿಶೇಷವಾಗಿ ಬರಮಾಡಿಕೊಳ್ಳಲಾಯಿತು.
ಶಾಲೆಯ ಅಧ್ಯಕ್ಷ ಅಝೀಝ್ ಸನ,ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್, ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ,ಟ್ರಸ್ಟಿಗಳಾದ ಝುಬೈರ್ ಕಲ್ಲಿಪಾಲ, ಹಮೀದ್ ಬದ್ರಿಯಾ,ಮಸೀದಿಯ ಕೋಶಾಧಿಕಾರಿ ಶರೀಫ್ ಪೊನ್ನೊಟು, ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ,ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ ,ಶಾಲೆ ಹಾಗೂ ಮದರಸದ ಅಧ್ಯಾಪಕ ವೃಂದದವರು ಉಪಸ್ಥಿರಿದ್ದರು.
ಶಾಲೆಯ ಕಾರ್ಯದರ್ಶಿ ನೋಟರಿ ಅಬೂಬಕರ್ ಮಾತನಾಡಿ ಹದಿನೈದು ವರ್ಷಗಳ ಹಿಂದೆ ಪ್ರಾರಂಭಗೊಂಡ ಈ ಶಾಲೆ ಈ ಮಟ್ಟಕ್ಕೆ ತಲುಪಲು ಕಾರಣಕರ್ತರಾದ ಪೋಷಕರನ್ನು ಅಭಿನಂಧಿಸಿದರು.
ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು. ಉಪ ಮುಖ್ಯ ಶಿಕ್ಷಕಿ ಗಾಯತ್ರಿ ವಂದಿಸಿದರು.




