November 23, 2026

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

0
image_editor_output_image1790595774-1748959116614

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯಯರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ದಿನಾಂಕ: 01-05-2025 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪದಲ್ಲಿ ಬಜಪೆ ಶಾಂತಿಗುಡ್ಡೆ ದಿ. ಬಾವ ಅಬ್ದುಲ್ ರೆಹಮಾನ್ ಎಂಬವರ ಪುತ್ರ
ಅಬ್ದುಲ್ ರಜಾಕ್ (59) ಎಂಬಾತನನ್ನು ಬಂಧಿಸಲಾಗಿದ್ದು ಈತ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು @ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿರುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!