March 13, 2026

ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೈಕ್ ಅಪಘಾತದಿಂದ ಯುವಕ ಮೃತ್ಯು

0
image_editor_output_image981964409-1749013164556

ಶಿವಮೊಗ್ಗ:ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭ ಅಪಘಾತವಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಗರದ ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಸಮೀಪದ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಮಂಗಳವಾರ ರಾತ್ರಿ ನಡೆದಿದೆ.

ವೆಂಕಟೇಶ ನಗರದ ನಿವಾಸಿ ಅಭಿ (21) ಮೃತ ಯುವಕ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್‌ ಜಾಥಾ ನಡೆಸಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಢಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾಗುತ್ತಿದ್ದಂತೆ ಯುವಕರು ಕೂಡಲೇ ನೆರವಿಗೆ ಧಾವಿಸಿದ್ದಾರೆ. ಆದರೆ ಆ ವೇಳೆಗಾಗಲೇ ಅಭಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!