March 13, 2026

ದೇರಳಕಟ್ಟೆ ಕಣಚೂರು ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜ್ ಗೆ ಹುಸಿ  ಬಾಂಬ್ ಬೆದರಿಕೆ ಕರೆ

0
image_editor_output_image-585009641-1749030760566

ಮಂಗಳೂರು: ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಇಂದು ಬೆಳಗ್ಗೆ 11 ಗಂಟೆಗೆ ಬಾಂಬು ಇಟ್ಟು ಸ್ಪೋಟಿಸುವುದಾಗಿ ಅನಾಮಧೇಯ ಫೋನ್ ಕರೆ ಬಂದಿದೆ.

ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬು ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನ ಕರೆಸಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಕ್ಯಾಂಪಸ್ ಅನ್ನು ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಕೊನೆಗೆ, ಇದೊಂದು ಹುಸಿ ಬಾಂಬು ಕರೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಹೆರಿಗೆ ವಿಭಾಗದ ಸ್ಥಿರ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿಯೋರ್ವಳು ಕರೆಯನ್ನ ಸ್ವೀಕರಿಸಿದ್ದು ಇಂಗ್ಲೀಷ್ ನಲ್ಲಿ ಮಾತನಾಡಿದ ವ್ಯಕ್ತಿಯೋರ್ವ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಲ್ಲಿ ಬಾಂಬ್ ಸ್ಪೋಟಿಸುವುದಾಗಿ ಹೇಳಿದ್ದು, ಎಲ್ಲರನ್ನು ಕೂಡಲೇ ಆಸ್ಪತ್ರೆಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!