March 13, 2026

ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಗೆ ಸೇರಿದ ಅಪಾರ ಅಭಿಮಾನಿಗಳು: ಕಾಲ್ತುಳಿತದಲ್ಲಿ ಇಬ್ಬರು ಮೃತ್ಯು-15ಕ್ಕೂ ಅಧಿಕ ಮಂದಿಗೆ ಗಾಯ

0
image_editor_output_image2068018460-1749038457339

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಇಬ್ಬರು ಆರ್​ಸಿಬಿ ಅಭಿಮಾನಿ ಮೃತಪಟ್ಟಿದ್ದಾರೆ.​

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!