March 13, 2026

ಬೆಂಗಳೂರಿನಲ್ಲಿ ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಸಂಖ್ಯೆ 7ಕ್ಕೇರಿಕೆ

0
image_editor_output_image2068018460-1749038457339

ಬೆಂಗಳೂರು: ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ನೂಕುನುಗ್ಗಲಿನಲ್ಲಿ ಏಳು ಮಂದಿ ಆರ್ ಸಿಬಿ ಅಭಿಮಾನಿಗಳು ಮೃತಪಟ್ಟಿದ್ದು ಹಲವು ಮಂದಿ ಅಸ್ತವಸ್ತಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರ ನಡೆದಿದೆ.

ಮಂಗಳವಾರವಷ್ಟೇ ಐಪಿಎಲ್ ಫೈನಲ್ ಪಂದ್ಯಾವಳಿ ನಡೆದು ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ್ದು ಇದರ ಬೆನ್ನಲ್ಲೇ ಆರ್ ಸಿಬಿ ಅಭಿಮಾನಿಗಳ ಹರ್ಷ ಮುಗಿಲುಮುಟ್ಟಿದ್ದು ಇದರ ಜೊತೆಗೆ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಅಭಿಮಾನಿಗಳು ಜಮಾಯಿಸಿದ್ದು ಈ ವೇಳೆ ತನ್ನ ನೆಚ್ಚಿನ ಆಟಗಾರನನ್ನು ನೋಡುವ ಉದ್ದೇಶದಿಂದ ನಡೆದ ನೂಕುನುಗ್ಗಲಿನಲ್ಲಿ ನಡೆದ ಕಾಲ್ತುಳಿತದಿಂದ ನಾಲ್ವರು ಕೊನೆಯುಸಿರೆಳೆದಿದ್ದಾರೆ, ಜೊತೆಗೆ ಹಲವು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!