March 13, 2026

ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಫುಟ್ ಪಾತ್ ಮೇಲೇರಿ ನಿಂತ ಕಾರು

0
image_editor_output_image-1587059294-1749040620487

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದು ಫುಟ್‌ಪಾತ್‌ ಮೇಲೇರಿ ನಿಂತ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಎಚ್ ಎಂಟಿ ಗ್ಯಾರೇಜ್ ಬಳಿ ಬುಧವಾರ (ಜೂನ್‌ 03) ಸಂಭವಿಸಿದೆ.

ಕರಾವಳಿ ಬೈಪಾಸ್ ನಿಂದ ಉಡುಪಿ ಸಿಟಿ ಕಡೆಗೆ ಬರುತ್ತಿದ್ದ ಕಿಯಾ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ನಾಲ್ವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!