ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯನ ಮೃತದೇಹ ಪತ್ತೆ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
ರಮೇಶ್ ರೈ ಅವರು ಇತ್ತೀಚೆಗೆ ನಡೆದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಕುಟುಂಬವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.





