March 13, 2026

ಗುಂಡ್ಯದಲ್ಲಿ Mercy  ಬಸ್ ಪಲ್ಟಿ: ಹಲವು ಮಂದಿಗೆ ಗಾಯ

0
image_editor_output_image-1871531238-1749267544078

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ವೇಳೆ ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಜೂ.7 ರಂದು ನಡೆದಿದೆ.

ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ Mercy ಹೆಸರಿನ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಲುಪುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇಬ್ಬರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!