February 1, 2026

ಕಡಬ: ಗುಂಡ್ಯ ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು

0
image_editor_output_image-89115409-1749388800325

ಕಡಬ: ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ಕಡಬದಲ್ಲಿ ನಡೆದಿದೆ.

ಮೃತ ಯುವಕನನ್ನು ಇಚ್ಚಂಪಾಡಿ ನಿವಾಸಿ ಜಯಾನಂದ ಶೆಟ್ಟಿ ಯವರ ಮಗ ಚೇತನ್ ಶೆಟ್ಟಿ(21) ಎಂದು ಗುರುತಿಸಲಾಗಿದ್ದು, ಈತನು ಮಂಗಳೂರಿನಲ್ಲಿ ವೈದ್ಯಕೀಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದು, ಇಂದು ರಜೆಯ ಸಂದರ್ಭ ಮನೆಯಲ್ಲೇ ಇದ್ದನು.

ಬೆಳಿಗ್ಗೆ ಕ್ರಿಕೆಟ್ ಆಡಲು ಹೊರಟ ಚೇತನ್ ಶೆಟ್ಟಿ, ಮಧ್ಯಾಹ್ನದ ವೇಳೆಗೆ ಸ್ನೇಹಿತರ ಜೊತೆ ಇಚ್ಲಂಪಾಡಿ ಸೇತುವೆ ಬಳಿ ಗುಂಡ್ಯ ಹೊಳೆಗೆ ಸ್ನಾನಕ್ಕೆ ಇಳಿದನು.

ಆದರೆ ಹೊಳೆಯ ನೀರಿನ ಆಳತೆ ಅರಿಯದೇ ಮಧ್ಯಾಹ್ನ ಸುಮಾರು 1.30 ಗಂಟೆಯ ವೇಳೆಗೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!