ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ನ ಬರ್ಬರ ಹತ್ಯೆ
ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜೂ.10ರ ಮಂಗಳವಾರ ತಡರಾತ್ರಿ ಜಿಲ್ಲೆಯ ಆಳಂದ ತಾಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ.
ಸುಧಾಕರ್ (32) ಕೊಲೆಯಾದವ ರೌಡಿ ಶೀಟರ್ ಎಂದು ತಿಳಿದು ಬಂದಿದೆ.
ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ನಲ್ಲಿ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಸುಧಾಕರ್ ನ ಸಹೋದರನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಳೆ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.




