February 3, 2026

ಮಧುರೈ: ಗೋಡೆ ಕುಸಿದು ಪೊಲೀಸ್ ಸಿಬ್ಬಂದಿ ಮೃತ್ಯು, ಓರ್ವನಿಗೆ ಗಾಯ

0
Madurai.jpg

ಮದುರೈ: ಬುಧವಾರ ನಸುಕಿನ ವೇಳೆ ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಹಳೆಯ ಅಂಗಡಿಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದು, ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಇಬ್ಬರು ಪೊಲೀಸ್ ಅಧಿಕಾರಿಗಳು, ಹೆಡ್ ಕಾನ್‌ಸ್ಟೆಬಲ್ ಸರವಣನ್ ಮತ್ತು ಕಾನ್‌ಸ್ಟೆಬಲ್ ಕಣ್ಣನ್ ಘಟನೆ ಸಂಭವಿಸಿದಾಗ ರಾತ್ರಿಯಲ್ಲಿ ಗಸ್ತು ಕೆಲಸದಲ್ಲಿ ನಿರತರಾಗಿದ್ದರು. ಅಂಗಡಿಯೊಂದರ ಮುಂದೆ ನಿಂತಿದ್ದ ಅವರ ಮೇಲೆ ಕಟ್ಟಡದ ಗೋಡೆ ಕುಸಿದು ಬಿದ್ದಿದೆ.

ಹೆಡ್ ಕಾನ್‌ಸ್ಟೆಬಲ್ ಸರವಣನ್ ಸ್ಥಳದಲ್ಲೇ ಮೃತಪಟ್ಟರೆ, ಕಣ್ಣನ್ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಕುಸಿದು ಬಿದ್ದ ಕಟ್ಟಡವು ಕನಿಷ್ಠ 100 ವರ್ಷಗಳಷ್ಟು ಹಳೆಯದಾಗಿದೆ ಎಂದು ನಂಬಲಾಗಿದೆ.

ಘಟನೆ ಬೆಳಕಿಗೆ ಬಂದ ನಂತರ, ಪೊಲೀಸರು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದರು. ಕಟ್ಟಡದ ಮಾಲೀಕರು ಮತ್ತು ಅದನ್ನು ಬಾಡಿಗೆಗೆ ಪಡೆದ ವ್ಯಕ್ತಿಯನ್ನು ಕೂಡ ತನಿಖೆಗೆ ಒಳಪಡಿಸಿದ್ದಾರೆ.

ಇದೇ ವೇಳೆ ತಮಿಳುನಾಡು ಸರ್ಕಾರ ಹೆಡ್ ಕಾನ್‌ಸ್ಟೆಬಲ್ ಸರವಣನ್ ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಮತ್ತು ಕಾನ್‌ಸ್ಟೆಬಲ್ ಕಣ್ಣನ್‌ಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!