ಗುಜರಾತ್: ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ವೇಳೆ ವಿಮಾನ ಪತನ
ಅಹಮದಾಬಾದ್: ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂ.12) ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.
ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ದಿತ್ತು.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿನಗರ ಬಳಿ ಪತನಗೊಂಡಿದೆ. ವಿಮಾನ ಅಪಘಾತಕ್ಕೀಡಾದ ಸ್ಥಳವು ವಸತಿ ಪ್ರದೇಶ ಎಂದು ವರದಿಯಾಗಿದೆ. ಆ ಪ್ರದೇಶಕ್ಕೆ ಹೋಗುವ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ.
ಆ ವಿಮಾನವನ್ನು ಏರ್ ಇಂಡಿಯಾ 171 ಎಂದು ಗುರುತಿಸಲಾಗಿದ್ದು, ಆನ್‌ಲೈನ್ ಫ್ಲೈಟ್ ಟ್ರ್ಯಾಕರ್‌ಗಳು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 1:10 ಕ್ಕೆ ಸೇವೆಯನ್ನು ತೋರಿಸಿದೆ.





