March 13, 2026

ಉಳ್ಳಾಲ: ಅಪಾರ್ಟ್ಮೆಂಟ್ ಕಟ್ಟಡದ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಮೃತ್ಯು

0
image_editor_output_image1103198175-1749796686339

ಉಳ್ಳಾಲ: ಅಪಾರ್ಟ್ಮೆಂಟ್ ಕಟ್ಟಡದ 12ನೇ ಮಹಡಿಯ ಬಾಲ್ಕನಿಯಿಂದ ಬಟ್ಟೆ ಒಣಗಲು ಹಾಕುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ದೇರಳಕಟ್ಟೆಯ ಯೆನಪೊಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹ್ಮದ್ ಮತ್ತು ಖಮರ್ಜಹಾ ಬಾನು ಎಂಬವರ ಪುತ್ರಿ 10ನೇ ತರಗತಿ ವಿದ್ಯಾರ್ಥಿನಿ ಹಿಬಾ ಐಮನ್(15) ಮೃತಪಟ್ಟ ಬಾಲಕಿ ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ದಂಪತಿ ಇಬ್ಬರೂ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು ಎನ್ನಲಾಗಿದೆ. ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರು. ಹಿಬಾ ರಾತ್ರಿ ಬಾಲ್ಕನಿಯಲ್ಲಿ ಬಟ್ಟೆ ಹಾಕಲೆಂದು ಕುರ್ಚಿಯಲ್ಲಿ ನಿಂತಾಗ ಆಯತಪ್ಪಿ ವಸತಿ ಸಂಕೀರ್ಣದ ಕಟ್ಟಡದಿಂದ ಕೆಳಗಡೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!