March 13, 2026

ಮಂಗಳೂರು: ಕೋಮು ಸಂಘರ್ಷ ತಡೆಯುವ ವಿಶೇಷ ಕಾರ್ಯಪಡೆ ಉದ್ಘಾಟನೆ

0
image_editor_output_image-1337212745-1749797296001

ಮಂಗಳೂರು: ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಶುಕ್ರವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.

ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯ ಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಎ.ಸಲೀಂ, ಅಪರ ಪೊಲೀಸ್ ಮಹಾ ನಿರ್ದೇಶಕ ಎಸ್.ಮುರುಗನ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಶೇಷ ಕಾರ್ಯಪಡೆ ಘಟಕದ ಡಿಐಜಿಪಿ (ಪ್ರಭಾರ) ಆಗಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್. ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!