ಅಹಮದಾಬಾದ್ ವಿಮಾನ ದುರಂತ: ಮೃತಪಟ್ಟವರ ಸಂಖ್ಯೆ 274ಕ್ಕೇರಿಕೆ
ಅಹಮದಾಬಾದ್: ಗುರುವಾರ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವೈದ್ಯಕೀಯ ಕಾಲೇಜಿಗೆ ಅಪ್ಪಳಿಸಿದ ಏರ್ ಇಂಡಿಯಾ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಬದುಕುಳಿದಿದ್ದರು. ಬಲಿಯಾದವರಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಒಬ್ಬರು.
ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಮೇಘನಿನಗರದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ ತಂಗಿದ್ದ 10 ವೈದ್ಯರು ಮತ್ತು ಅವರ ಸಂಬಂಧಿಕರು ಸೇರಿದ್ದಾರೆ ಎಂದು ಹೇಳಲಾಗಿದೆ ಅಲ್ಲದೆ ಘಟನೆಯಲ್ಲಿ ಇಪ್ಪತ್ತನಾಲ್ಕು ಎಂಬಿಬಿಎಸ್ ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.





