March 13, 2026

ಕೇದಾರನಾಥ: ಹೆಲಿಕಾಪ್ಟರ್ ಪತನ: ಮಗು ಸಹಿತ ಆರು ಮಂದಿ ಮೃತ್ಯು

0
image_editor_output_image56009305-1749960364072

ಡೆಹರಾಡೂನ್: ಇಂದು ಬೆಳಿಗ್ಗೆ 5:20ರ ಸುಮಾರಿಗೆ ಉತ್ತರಾಖಂಡದ ಕೇದಾರನಾಥ ಧಾಮದಿಂದ ಗುಪ್ತಕಾಶಿಗೆ ಹೋಗುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ.

ಹೆಲಿಕಾಪ್ಟರ್‌ನಲ್ಲಿ ಪೈಲಟ್, ಒಂದು ಮಗು ಸೇರಿ ಸೇರಿದಂತೆ ಆರು ಮಂದಿ ಇದ್ದರು. ಎಲ್ಲರೂ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಹೆಲಿಕಾಪ್ಟರ್‌ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ನವರು. ಪರಿಹಾರ ಮತ್ತು ರಕ್ಷಣಾ ಕಾರ್ಯದ ದೃಷ್ಟಿಯಿಂದ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಘಟನೆಯ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (ಯುಸಿಎಡಿಎ) ತಿಳಿಸಿದೆ.

ರುದ್ರಪ್ರಯಾಗ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಅಪಘಾತದ ದುಃಖಕರ ಸುದ್ದಿ ಬಂದಿದೆ. ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಇತರ ರಕ್ಷಣಾ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಎಲ್ಲ ಪ್ರಯಾಣಿಕರ ಸುರಕ್ಷತೆಗಾಗಿ ನಾನು ಬಾಬಾ ಕೇದಾರನನ್ನು ಪ್ರಾರ್ಥಿಸುತ್ತೇನೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!