17 ವರ್ಷದ ಬಾಲಕಿಯನ್ನು ಅಪಹರಿಸಿ 9 ತಿಂಗಳಿಗೂ ಹೆಚ್ಚು ಕಾಲ ಅತ್ಯಾಚಾರ
ಉತ್ತರ ಪ್ರದೇಶ: 17 ವರ್ಷದ ಬಾಲಕಿಯನ್ನು ಅಪಹರಿಸಿ ವಾರಣಾಸಿಗೆ ಕರೆದೊಯ್ದಿದ್ದ ಯುವಕ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಜಿಲ್ಲೆಯ ನಹ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಭರೌಲಿ ಸೇತುವೆ ಬಳಿ ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದ್ದು, ಬಾಲಕಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದರು.
ಜನವರಿ 16 ರಂದು ಬಾಲಕಿಯನ್ನು ಅಪಹರಿಸಿದ್ದ. ಸಂತ್ರಸ್ತೆ ತಂದೆಯ ದೂರಿನ ಮೇರೆಗೆ ಅಪಹರಣ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಪ್ರವೀಣ್ ಸಿಂಗ್ ಹೇಳಿದರು.
ಸಂಸ್ತಸ್ತೆಯು ಹೇಳಿಕೆ ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.




