ಜೂನ್ 16: ದ.ಕ ಜಿಲ್ಲೆಯ 5 ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ
ದ.ಕ. ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
ಜಿಲ್ಲಾಡಳಿತದಿಂದ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಗಳಲ್ಲಿ ನೇಮಿಸಲಾಗಿರುವ Incident Commander ಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ. ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ




