March 13, 2026

ಉಳ್ಳಾಲ: ಹಾಸ್ಟೆಲ್ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ: ವಿದ್ಯಾರ್ಥಿಗಳ ರಕ್ಷಣೆ

0
image_editor_output_image-1252046215-1750049646672

ಉಳ್ಳಾಲ: ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ.

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಲಿಯುವ NRI ವಿದ್ಯಾರ್ಥಿಗಳಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಕಟ್ಟಡದ ಟಾಪ್ ಫ್ಲೋರ್ ನಲ್ಲಿ ಸಭಾಂಗಣವಿದ್ದು, ಅಲ್ಲಿ ಯಾವುದೇ ಕಾರ್ಯಕ್ರಮಗಳಿರಲಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು ನಡೆಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಜನರೇಟರ್ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ತಗಲಿರುವುದಾಗಿ ತಿಳಿದುಬಂದಿದೆ

Leave a Reply

Your email address will not be published. Required fields are marked *

error: Content is protected !!