March 13, 2026

ವಿಟ್ಲ: ಕನ್ಯಾನದಲ್ಲಿ ಭೂಮಿ ಕಂಪಿಸಿದ ಅನುಭವ

0
IMG-20250616-WA0011.jpg

ವಿಟ್ಲ: ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಜನರಿಗೆ ಒಂದು ಕ್ಷಣಕ್ಕೆ ಭೂಮಿ‌ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕಂಪಿಸಿದ ಅನುಭವ ಕೇವಲ ಒಂದೆರಡು ಸೆಕೆಂಡ್ ಮಾತ್ರ ಉಂಟಾಗಿದೆ. ಈ ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಯಬಿಟ್ಟಿದ್ದು, ಗ್ರಾಮ ಕರಣಿಕ ಅನಿಲ್ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಕಲೆ ಹಾಕಿದ್ದಾರೆ. ಯಾವುದೇ ಮನೆಯಲ್ಲಿ ಹಾನಿಯಾಗಿರುವ ಬಗ್ಗೆ ಕಂಡು ಬಂದಿಲ್ಲ. ಆದರೆ ಕೆಲವು ಮಂದಿ ಮಾತ್ರ ಕಂಪಿಸಿದ ಅನುಭವ ಆಗಿದೆ ಎಂದು ಮಾತ್ರ ಹೇಳುತ್ತಿದ್ದಾರೆ.

ಕೆಲವು ತಿಂಗಳ ಹಿಂದೆ ವಿಟ್ಲದಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿತ್ತು. ಪರಿಶೀಲಿಸಿದಾಗ ಮಾಡತ್ತಡ್ಕ ಎಂಬಲ್ಲಿರುವ ಕಲ್ಲಿನ ಕೋರೆಯಲ್ಲಿ ಸ್ಫೋಟಕ ದಾಸ್ತಾನು ಇರಿಸಿದ್ದ ಸ್ಥಳದಲ್ಲಿ ಸ್ಫೋಟ ಉಂಟಾಗಿ ಘಟನೆ ನಡೆದಿರುವುದು ಬೆಳಕಿಗೆ ಬಂದಿತ್ತು. ಇದು ಕೂಡಾ ಅದೇ ರೀತಿ ಘಟನೆ ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!