ಬೆಳ್ತಂಗಡಿ: ಬೈಕ್ ಸಮೇತ ನದಿಯಲ್ಲಿ ಕೊಚ್ಚಿ ಹೋದ ಯುವಕರು: ಸಿನಿಮೀಯ ರೀತಿಯಲ್ಲಿ ಬದುಕುಳಿದ ಯುವಕರು
ಬೆಳ್ತಂಗಡಿ: ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ.
ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ದ್ವಿಚಕ್ರ ವಾಹನ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಅದೃಷ್ಟವಶಾತ್ ದ್ವಿಚಕ್ರ ವಾಹನ ನದಿಯ ಕಲ್ಲುಗಳ ನಡುವೆ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.




