March 13, 2026

ಮಂಗಳೂರು: ಚಾಲಕನ ನಿಯಂತ್ರಣ ಕಳೆದು ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು:ಯುವ ವೈದ್ಯ ಮೃತ್ಯು

0
image_editor_output_image284937721-1750157051900

ಮಂಗಳೂರು: ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಪಲ್ಟಿಯಾದ ಘಟನೆ ನಗರದ ನಂತೂರಿನ ತಾರೆತೋಟ ಬಳಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೂಲತಃ ಕೇರಳದ ಆಲಪ್ಪುಝ ನಿವಾಸಿಯಾಗಿದ್ದು, ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮುಗಿಸಿ ಅಲ್ಲಿಯೇ ಡ್ಯೂಟಿಗೆ ಸೇರಿದ್ದ ಡಾ.ಮೊಹಮ್ಮದ್ ಅಮಲ್ (29) ಮೃತರು.

ನಿನ್ನೆ ರಾತ್ರಿ 11.45ರ ಸುಮಾರಿಗೆ ಇವರು ಖಾಸಗಿ ಮೆಡಿಕಲ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿನಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಂತೂರಿನಿಂದ ಪಂಪ್ವೆಲ್ ಕಡೆಗೆ ತನ್ನ ಕಾರಿನಲ್ಲಿ ತೆರಳುತ್ತಿದ್ದಾಗ ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದು, ಅತಿ ವೇಗದಿಂದಾಗಿ ಡಿವೈಡರ್ ತಾಗಿ ನಡುವೆ ಹಾಕಿರುವ ಗ್ರಿಲ್ಸ್ ಮೇಲೆ ಹೋಗಿದೆ. ಆನಂತರ ಗ್ರಿಲ್ಸ್ ತಾಗಿಕೊಂಡೇ 2-3 ಪಲ್ಟಿಯಾಗಿ ರಸ್ತೆಯ ಮೇಲೆ ಬಿದ್ದಿದೆ.

ಕಾರು ಚಲಾಯಿಸುತ್ತಿದ್ದ ಡಾ.ಮುಹಮ್ಮದ್ ಅಮಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಇವರ ಜೊತೆಗಿದ್ದ ವಿದ್ಯಾರ್ಥಿನಿಗೂ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!