March 13, 2026

ಬಂಟ್ವಾಳ: ನೇಣು ಬಿಗಿದ ಸ್ಥಿತಿಯಲ್ಲಿ ಗಂಡ- ಹೆಂಡತಿ ಮೃತದೇಹ ಪತ್ತೆ: ತುಂಬು ಗರ್ಭಿಣಿಯಾಗಿದ್ದ ಹೆಂಡತಿ

0
IMG-20250619-WA0000.jpg

ಬಂಟ್ವಾಳ: ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು.

ತಿಮ್ಮಪ್ಪ ಮೂಲ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುತ್ತಿಗೆ ಭಾಗದಲ್ಲಿ ಗಾಯಗಳಿವೆ ಎನ್ನಲಾಗಿದೆ.

ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ‌. ಇವರಿಗೆ ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ.

ಪ್ರಸ್ತುತ ಪತ್ನಿ ಗರ್ಭಿಣಿಯಾಗಿದ್ದು, ಸೀಮಂತದ ದಿನಾಂಕವೂ ನಿಗದಿಯಾಗಿತ್ತು ಎನ್ನಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!