December 16, 2025

ವಿಟ್ಲ: ಅರ್ಚಕರ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿ

0
IMG-20250621-WA0001.jpg

ಉಕ್ಕುಡ: ತಡರಾತ್ರಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ.

ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ಕಳ್ಳತನ ನಡೆದಿದೆ. ರಜತ್ ಭಟ್ ತನ್ನ ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಕಿವಿ ಓಲೆ ಮತ್ತು ಸರ ದೋಚಿ ಪರಾರಿಯಾಗಿದ್ದು, ಒಟ್ಟು ಎರಡು ಪವನ್‌ ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!