June 21, 2026

ಬಂಟ್ವಾಳ: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

0
image_editor_output_image1145105304-1750525382213

ಬಂಟ್ವಾಳ: ದ್ವಿಚಕ್ರವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ‌ತಾಲೂಕಿನ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿಇಬ್ರಾಹಿಂ ಎನ್ ಮೃತಪಟ್ಟ ವ್ಯಕ್ತಿ.

‌‌‌‌ ಮಂಗಳೂರು ಕಡೆಯಿಂದ ಬೆಳ್ತಂಗಡಿ ಮನೆಯ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಇಬ್ರಾಹಿಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರಿನಿಂದ ಬೆಂಗಳೂರು ‌ಕಡೆಗೆ ತೆರಳುತ್ತಿದ್ದ ಮೀನು ಕೊಂಡುಹೋಗುವ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ.

‌ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!