March 13, 2026

ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆ

0
image_editor_output_image119315797-1750530532256

ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಜೂನ್ 21, 2025ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಉತ್ಸಾಹಭರಿತವಾಗಿ ಮತ್ತು ಭಾವಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಶಾಲೆಯ  ಪ್ರಾಂಶುಪಾಲರಾದ ಶ್ರೀ ಲಿಬಿನ್ ಝೇವಿಯರ್ ಅವರು  ಇಂದಿನ ವೇಗವಾದ ಜೀವನಶೈಲಿಯಲ್ಲಿ ಯೋಗದ ಪ್ರಾಮುಖ್ಯತೆ ಹಾಗೂ ಆರೋಗ್ಯಕರ ಜೀವನದ ನಿರ್ವಹಣೆಯಲ್ಲಿ ಅದರ ಪಾತ್ರವನ್ನು ವಿವರಿಸಿದರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಆನಂದ್ ಕುಮಾರ್ ಮತ್ತು ಶ್ರೀಮತಿ ವಾಣಿ ಕುಮಾರಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು ಮತ್ತು ಉಸಿರಾಟದ ಅಭ್ಯಾಸಗಳನ್ನು ಕಲಿಸಿ ಕೂಡಲಾಯಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಲವಚಿಕತೆ, ಏಕಾಗ್ರತೆ ಮತ್ತು ಸಮರ್ಪಣೆಯನ್ನು ತೋರಿಸಿದರು. ಶಿಕ್ಷಕರೂ ಕೂಡಾ ಭಾಗವಹಿಸಿ ಆರೋಗ್ಯಪೂರ್ಣ ಜೀವನಶೈಲಿಗೆ ಮಾದರಿಯಾದರು.


ಈ ಕಾರ್ಯಕ್ರಮವು ಮಕ್ಕಳಲ್ಲಿ ಯೋಗದ ಮೂಲ ಉದ್ದೇಶವಾದ ದೇಹ ಮತ್ತು ಮನಸ್ಸಿನ ಆರೋಗ್ಯ ವೃಧ್ದಿಸುವ ಕೆಲಸ ಮಾಡಲಿದೆ ಎಂದು ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!