December 15, 2025

ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳು NIA ಕಸ್ಟಡಿಗೆ

0
image_editor_output_image1094986988-1750745687162

ಮಂಗಳೂರು: ಬಜ್ಪೆ ಕಿನ್ನಿಪದವು ಬಳಿ ಸಂಭವಿಸಿದ್ದ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ 11 ಆರೋಪಿಗಳ ಪೈಕಿ ಎಂಟು ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನ್ನ ಕಸ್ಟಡಿಗೆ ಪಡೆದಿದ್ದು, ವಿಚಾರಣೆ ಆರಂಭಿಸಿದೆ

ಆರೋಪಿಗಳ ವಿರುದ್ಧ ಎನ್ಐಎ ಪ್ರತ್ಯೇಕವಾಗಿ ಎಫ್​ಐಆರ್ ದಾಖಲಿಸಿದ್ದು, ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್ಐಎ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ 8 ಮಂದಿ ಆರೋಪಿಗಳನ್ನು ಎನ್ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಕಳೆದ ಮೇ 1 ರಂದು ಬಜಪೆ ಕಿನ್ನಿಪದವು ಎಂಬಲ್ಲಿ ರೌಡಿ ಶೀಟರ್ ಕಂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ವಾಹನಗಳಲ್ಲಿ ಚೇಸ್‌ ಮಾಡಿ ಅಟಕಾಯಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದು, ಹತ್ಯೆಯಲ್ಲಿ ಮತೀಯ ಸಂಘಟನೆಯೊಂದರ ಕೈವಾಡವಿದ್ದು, ಟಾರ್ಗೆಟ್‌ ಕಿಲ್ಲಿಂಗ್‌ ಆರೋಪಿಸಿ ಪತ್ರ ಬರೆದಿದ್ದು. ಅಲ್ಲದೆ ರಾಜ್ಯದ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸುಹಾಸ್ ಶೆಟ್ಟಿ ಹತ್ಯೆ ಕೇಸ್ NIA ಗೆ ನೀಡುವಂತೆ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಈನ ಪ್ರಕರಣ ಎನ್‌ಐಎಗೆ ಹಸ್ತಾಂತರಗೊಂಡಿದ್ದು, ಇದೀಗ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಎನ್‌ಐಎ ವಿಚಾರಣೆಯ ವೇಳೆ ಆರೋಪಿಗಳು ಹಲವಾರು ಮಹತ್ವದ ಮಾಹಿತಿಗಳನ್ನು ನೀಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!